ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ಕೊಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ