Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಆಯ್ಕೆ ; ನಾಳೆ ಪ್ರಮಾಣ ವಚನ ಸ್ವೀಕಾರ

Udupi

 


ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ.ವಿ. ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರಾಗಿ ಒಡಿಶಾಕ್ಕೆ ತೆರಳಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಯ್ಕೆಯ ಕುರಿತು ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ. ಒಡಿಶಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮೋಹನ್ ಚರಣ್ ಮಾಝಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಸಂತೋಷವಾಗಿದೆ. ಅವರು ಪಕ್ಷದ ಯುವ ಮತ್ತು ಕ್ರಿಯಾಶೀಲ ಕಾರ್ಯಕರ್ತರಾಗಿದ್ದು, ಒಡಿಶಾದ ಹೊಸ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಪ್ರಗತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.

ಇದರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಿಸಲು ನಿರ್ಧರಿಸಲಾಗಿದೆ. ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರು ಉಪ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಸೇವೆ ಸಲ್ಲಿಸಲಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ರಾಜನಾಥ ಸಿಂಗ್‌ ಪೋಸ್ಟ್‌ ಮಾಡಿದ್ದಾರೆ. ಈಚೆಗೆ ನಡೆದ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ಬಿಜೆಡಿ ಪಕ್ಷ ಹೀನಾಯವಾಗಿ ಸೋತಿತ್ತು. ಬಿಜೆಪಿ ಅಭೂತಪೂರ್ವ ಬಹುಮತ ಪಡೆದಿತ್ತು








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo