Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

 


ಭಾರತದ ತುಂಬೆಲ್ಲ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆ ಮಾಡಿದೆ. ಇಡೀ ಭಾರತವೇ ಇಂದು ದೇಶಭಕ್ತಿಯಲ್ಲಿ ಮಿಂದೇಳುತ್ತಿದೆ. ನವದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು.

ಅಲ್ಲದೇ, ಧ್ವಜಾರೋಹಣಕ್ಕೂ ಮುನ್ನ ಅವರು ರಾಜ್‌ ಘಾಟ್‌ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ರಾಜ್‌ಘಾಟ್‌ನಿಂದ ಕೆಂಪುಕೋಟೆಗೆ (Red Fort) ತಲುಪಿದರು. ನರೇಂದ್ರ ಮೋದಿ ಅವರನ್ನು ಗನ್ ಸೆಲ್ಯೂಟ್ ಮೂಲಕ ಸ್ವಾಗತಿಸಲಾಯಿತು.

ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್! ಶುಭಾಶಯ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo