Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ವೀಡಿಯೋ; ಕನ್ನಡದ ಖ್ಯಾತ ಯ್ಯೂಟ್ಯೂಬರ್ DV ಪೊಲೀಸ್ ವಶಕ್ಕೆ

Udupi

 

ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಯೂಟ್ಯೂಬರ್ ದೀಪಕ್ (@DVINKANNADA)ರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತಂತೆ ದೀಪಕ್ ಸ್ವತಃ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

ಇದೀಗ ಇದೇ ವಿಚಾರವಾಗಿ ಬೆಂಗಳೂರಿನ ಕಾಡುಗೋಡಿ ಪೊಲೀಸರು ಯೂಟ್ಯೂಬರ್ ದೀಪಕ್ ರನ್ನು ವಶಕ್ಕೆ ಪಡೆದಿದ್ದಾರೆ.

ಅಲ್ಲದೆ ಈ ಕುರಿತು ಎಕ್ಸ್ ನಲ್ಲಿ ಸ್ಪಷ್ಟನೆ ಕೂಡ ನೀಡಿರುವ ಪೊಲೀಸರು (@dcpwhitefield) 'ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಾಕಿ ಸಾರ್ವಜನಿಕರಲ್ಲಿ ಸುರಕ್ಷತಾ ಭಯವನ್ನು ಉಂಟುಮಾಡಿರುವ ದೀಪಕ್‌ ಎಂಬ ವ್ಯಕ್ತಿಯನ್ನು ಪತ್ತೆ ಮಾಡಿ, ವಶಕ್ಕೆ ಪಡೆದು, ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿರುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo