ಬೆಂಗಳೂರು :-ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಮಾಹಿತಿಗಳನ್ನು ಮಾಧ್ಯಮಗಳು ಬಯಲು ಮಾಡುತ್ತಿರುವ ಹಿನ್ನೆಲೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ