Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯದ ವಿವಿಧ ಹಗರಣಗಳ ತನಿಖೆಗಳ ಪ್ರಗತಿ ಪರಿಶೀಲನೆಗೆ ಸಮಿತಿ ರಚಿಸಿದ ಸಿಎಂ

 


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಸಮಿತಿ ರಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಾಗಿತ್ತು.

ಈಗ ಮುಂದುವರೆದ ಭಾಗವಾಗಿ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದಾರೆ.

ವಿವಿಧ ಹಗರಣಗಳ ಪ್ರಗತಿ, ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಸಚಿವ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ. ಈ ಸಚಿವರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದ್ದಾರೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo