Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಶಾರದೋತ್ಸವ ವಿಸರ್ಜನಾ ಮೆರವಣಿಗೆ; ಮದ್ಯ ಮಾರಾಟ ನಿಷೇಧ

Udupinews

 




ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ವಿವಿದೆಡೆ ನಿಗದಿತ ದಿನದಂದು ಮದ್ಯಮಾರಾಟ ವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಅ. 12ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ, ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಹಾಗೂ ಅ.14ರಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ ನಿಷೇಧವಿರುತ್ತದೆ. 

ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶೀಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3 ರಡಿ ನೀಡಿ ರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇಲಿನೆಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ದಿನಗಳಂದು ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರವರೆಗೆ ನಿಷೇಧಿಸಿ, ಒಣದಿನ ಎಂದು ಘೋಷಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo