ಕಾರ್ಕಳ: ಮತ್ತಿಬ್ಬರು ಅಕ್ರಮ ವಲಸಿಗರು ಪೊಲೀಸ್ ವಶಕ್ಕೆ
ಉಡುಪಿ: ಮಲ್ಪೆಯಲ್ಲಿ ಅಕ್ರಮ ಬಾಂಗ್ಲಾದೇಶ ಪ್ರಜೆಗಳ ಬಂಧನದ ನಂತರ ಇದೀಗ ಕಾರ್ಕಳದಿಂದ ಮತ್ತಿಬ್ಬರು ಅಕ್ರಮ ವಲಸಿಗರನ್ನು ಬಂಧಿಸಿರುವ ಕುರಿತು ವರದಿಯಾಗಿದೆ .
ಬಂಧಿತರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ಕಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಾರ್ಕಳದಿಂದ ಮತ್ತಿಬ್ಬರು ಅಕ್ರಮ ವಲಸಿಗರನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ವಿಚಾರಣೆ ಬಳಿಕ ಬಂಧನ ಪ್ರಕ್ರಿಯೆ ನಡೆಯಲಿದೆ. ಎರಡು ಸ್ಥಳಗಳಲ್ಲಿ ಮಹಜರ್ ಪ್ರಕ್ರಿಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ