Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಅ.21ರಿಂದ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಕಾರ್ಯಕ್ರಮ: ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ

Udupinews

 




ಅ.21ರಿಂದ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಕಾರ್ಯಕ್ರಮ: ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ 


ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಜಾನುವಾರಗಳಿಗೆ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಾನುವಾರುಗಳಲ್ಲಿ ಹೆಚ್ಚಾಗಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯ ಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21ರಿಂದ ನವೆಂಬರ್ 20ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. ಇದರಲ್ಲಿ ಎಲ್ಲಾ ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿ ಕೊಳ್ಳಬೇಕು ಎಂದರು.

ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸ ಬೇಕು ಎಂದರು.

ಐದನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,15,401 ಜಾನುವಾರುಗಳ ಗುರಿ ನಿಗದಿಪಡಿಸಿ, 2,08,558 ಜಾನುವಾರು ಗಳಿಗೆ ಲಸಿಕೆ ಹಾಕಿಸಿ, ಶೇ.96.82ರಷ್ಟು ಪ್ರಗತಿ ಸಾಧಿಸಲಾಗಿದೆ. ಅದೇ ರೀತಿ ಆರನೇ ಸುತ್ತಿ ನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾ ಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.

ಇದೇ ವೇಳೆ ಕಾಲುಬಾಯಿ ರೋಗದ ಕುರಿತು ಸಮಗ್ರ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ. ರೆಡ್ಡಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo