Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಉದ್ಯಮಿ ಡಾ.ವಿಜಯ ಸಂಕೇಶ್ವರ ರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ

Udupinews

 




ಉಡುಪಿ: ಉದ್ಯಮಿ ಡಾ.ವಿಜಯ ಸಂಕೇಶ್ವರ ರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ   


ಕೋಟ :ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ನಡೆಯುವ ಸದ್ಭಾವನಾ 2024 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಈ ಬಾರಿ ನವೆಂಬರ್ 16 ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದೆ.

ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 20ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ.

ಇದೇ ವೇಳೆ ಸ್ಥಳೀಯ ಸಾಧಕರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಲಿದ್ದು , ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಿದೆ.ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ , ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನೀಡಲಿದೆ. ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ಶ್ರೇಷ್ಟ ನಟ ಎಸ್ ದೊಡ್ಡಣ್ಣ,ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಉಪಸ್ಥಿತರಿರಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಯೂರಿ ನೃತ್ಯ ತಂಡ ಕುಂಭಾಶಿ, ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಅವಿಭಜಿತ ಜಿಲ್ಲೆಗಳ ಪ್ರಸಿದ್ಧ ನಾಟಕ ತಂಡ ಪಿಂಗಾರ್ ಕಲಾವಿದರ್ ಬಿದ್ರೆ ಇವರ ಸಾಮಾಜಿಕ ಪೌರಾಣಿಕ ಹಿನ್ನಲ್ಲೆಯಯಳ್ಳ ಹಾಸ್ಯಮಯ ಕದಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ತಿಳಿಸಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo