Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ ಕೋರ್ಟ್!

Udupinews

 




ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ ಕೋರ್ಟ್!


ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದೆ. 

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಆದೇಶಿಸಿದೆ.

ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಇಂದು ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ದಿನೇಶ್‌ ಗುಂಡೂರಾವ್‌ ಪತ್ನಿ ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಸಕ ಯತ್ನಾಳ್ಗೆ ಸಮನ್ಸ್‌ ಜಾರಿಗೊಳಿಸಿತ್ತು.

ಆದ್ರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo