ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಶ್ರೀಧರ ಪ್ರಸಾದ್ ಕಾಡೂರು
ಉಡುಪಿ : ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಪ್ರಾಂಶುಪಾಲರಾಗಿ ಪ್ರೊ.ಶ್ರೀಧರ ಪ್ರಸಾದ್ ಕಾಡೂರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಕಾಸರಗೊಡು ಜಿಲ್ಲೆಯ ಪೈವಳಿಕೆಯ ನಿವೃತ್ತ ಕನ್ನಡ ಪಂಡಿತರಾದ ದಿ.ಕಾಡೂರು ಕೃಷ್ಣ ಭಟ್ ಮತ್ತು ದಿ.ಪರಮೇಶ್ವರಿ ದಂಪತಿ ಸುಪುತ್ರರಾಗಿದ್ದಾರೆ. ಇವರು ಈ ಮೊದಲು ಸರಕಾರಿ ವಿಜ್ಞಾನ ಕಾಲೇಜು ಹಾಸನ ಮತ್ತು ಮಂಗಳೂರಿನ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯ ಕರ್ನಾಟಕ ಜ್ಞಾನ ಆಯೋಗ ತಜ್ಞರ ಸಮಿತಿಯ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್‌ಡಿಎಂ ಕಾಲೇಜಿನ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಎಸ್., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ.ನಿಕೇತನ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗೌರಿ ಭಟ್, ಕಾಲೇಜಿನ ಕಛೇರಿ ಅಧೀಕ್ಷಕ ಸುಧಾ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕೃಷ್ಣ ಭಟ್ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ