ಇಂದ್ರಾಳಿ: ರೈಲಿನಡಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ
ಉಡುಪಿ: ಮದ್ಯ ಸೇವಿಸಿ ಮನೆಯಲ್ಲಿ ಗಲಾಟೆ ಮಾಡಿದ ವಿಚಾರದಲ್ಲಿ ಮನನೊಂದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ಗುರುವಾರ ರಾತ್ರಿ ವೇಳೆ ನಡೆದಿದೆ.
ಮೃತರನ್ನು ಮೂಡಸಗ್ರಿಯ ನೀಲಾಧರ ನಾಯ್ಕ(56) ಎಂದು ಗುರುತಿಸ ಲಾಗಿದೆ.
ಮದ್ಯ ಸೇವಿಸಿ ಬಂದು ಪ್ರತಿದಿನ ಗಲಾಟೆ ಮಾಡುತ್ತಿದ್ದ ಇವರು, ಕ್ಷುಲ್ಲಕ ಕಾರಣಕ್ಕೆ ಸಿಟ್ಟಿಗೆದ್ದು ಮನೆಯಿಂದ ಹೊರ ಬಂದು, ಆತ್ಮಹತ್ಯೆ ಮಾಡಿ ಕೊಂಡಿದ್ದಾರೆನ್ನಲಾಗಿದೆ.
ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಇವರ ಮೃತದೇಹ ಕಂಡುಬಂದಿದ್ದು, ಸಮಾಜ ಸೇವಕ ನಿತ್ಯಾನಂದ ಒಳ ಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ