ಉಡುಪಿ : 22 ಹಿರಿಯ ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ-2024
ಉಡುಪಿ : ಕರಾವಳಿಯ ಯಕ್ಷಗಾನ ಹಾಗೂ ಯಕ್ಷಗಾನ ಕಲಾವಿದ ಶ್ರೇಯೋಭಿವೃದ್ಧಿಗಾಗಿ ಇರುವ ಉಡುಪಿಯ ಯಕ್ಷಗಾನ ಕಲಾರಂಗ ಪ್ರತಿ ವರ್ಷ ಹಿರಿಯ ಸಾಧಕರ ಸ್ಮರಣಾರ್ಥ ಹಾಗೂ ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ.
ಒಟ್ಟು 22 ಮಂದಿ ತೆಂಕು ಹಾಗೂ ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದರನ್ನು 2024ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಪ್ರಶಸ್ತಿಗಳು ತಲಾ 20,000ರೂ. ನಗದು ಸಹಿತ ಪ್ರಶಸ್ತಿ ಪರಿಕರಗಳನ್ನೊಳ ಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ನ. 17ರಂದು ಅಪರಾಹ್ನ 3 ರಿಂದ ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿ ಸಭಾಂಗಣದಲ್ಲಿ ಜರಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ