ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಹಿರಿಯ ಸಹಕಾರಿ ಮುಖಂಡ ಇರ್ಮಾಡಿ ಕೆ.ತಿಮ್ಮಪ್ಪ ಹೆಗ್ಡೆ ನಿಧನ
ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ಹಿರಿಯ ಸಹಕಾರಿ ಮುಖಂಡರಾದ, ಇರ್ಮಾಡಿ ಕೆ. ತಿಮ್ಮಪ್ಪ ಹೆಗ್ಡೆ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಸ್ಥೆಯಲ್ಲಿ ಅಮೂಲ್ಯ ಸೇವೆಯನ್ನು ಸಲ್ಲಿಸಿದ್ದ ಇವರು ಅತ್ಯಂತ ಕ್ರಿಯಾಶೀಲರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಮುಖವಾಗಿ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ