Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್‌ಗೆ ಅವಕಾಶ ನೀಡಲ್ಲ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupinews

 






ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್‌ಗೆ ಅವಕಾಶ ನೀಡಲ್ಲ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ 


ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣ ಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು. 

ಶೀಘ್ರವೇ ಉಡುಪಿಯಲ್ಲಿ ಜನತಾ ದರ್ಶನ ಮಾಡುತ್ತೇವೆ. ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್ ಗೆ ಅವಕಾಶ ಕೊಡಲ್ಲ. ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ಸಿಗರು ನಗರ ನಕ್ಸಲರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಧಾನಮಂತ್ರಿಗಳು ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಪಕ್ಷಾತೀತವಾಗಿ ನರೇಂದ್ರ ಮೋದಿ ನಮ್ಮ ಪ್ರಧಾನಿಗಳು. ನಮ್ಮ ಪ್ರಧಾನಿ ಮೇಲೆ ನಮಗೆ ಗೌರವ ಇದೆ. ಕಾಂಗ್ರೆಸ್ಸನ್ನು ಗುರಿಯಾಗಿಸಿ ಅವರು ಈ ಮಾತನಾಡಿದ್ದರೆ ಅದು ಅಸಂವಿಧಾನಿಕ ಮಾತಾಗುತ್ತದೆ ಎಂದರು.








.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo