ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ
ಉಡುಪಿ : ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಚಾಲನೆ ನೀಡಿ, ನಶಾ ಮುಕ್ತ ಭಾರತ ಅಭಿಯಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಈ
ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ