ಅಮೆರಿಕ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‌ಗೆ ಭರ್ಜರಿ ಗೆಲುವು
ಅಮೆರಿಕ ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮುಂದಿನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದಾರೆ. ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ 277 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಬಹುಮತ ಪಡೆದಿದೆ.
ಇನ್ನು ಹಾಲಿ ಉಪಾಧ್ಯಕ್ಷೆ ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದಾರೆ. ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 538 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ 277, ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ 226 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಗೆಲುವಿನ ಬಳಿಕ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಇತಿಹಾಸವನ್ನು ಮರು ಸೃಷ್ಟಿಸಿದ್ದೇವೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ