ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಸವಾರ ಮೃತ್ಯು
ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ತಾಲೂಕಿನ ಕೊಪ್ಪಲಂಗಡಿ ಬಳಿ ನಡೆದಿದೆ.
ಹರೀಶ್ ಕುಮಾರ್ (45) ಮೃತ ದುರ್ದೈವಿ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಅದೇ ಮಾರ್ಗವಾಗಿ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆಗೆ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ