Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ " ಸುಲ್ತಾನ್‌ಪುರ" ಎಂಬ ಸುಳ್ಳು ಸುದ್ದಿ: ಜಿಲ್ಲಾಧಿಕಾರಿ ಸ್ಪಷ್ಟನೆ

Udupinews





ಉಡುಪಿ: ಸಾಮಾಜಿಕ ಜಾಲತಾಣದಲ್ಲಿ " ಸುಲ್ತಾನ್‌ಪುರ" ಎಂಬ ಸುಳ್ಳು ಸುದ್ದಿ: ಜಿಲ್ಲಾಧಿಕಾರಿ ಸ್ಪಷ್ಟನೆ 


ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಊರಿನ ಹೆಸರನ್ನು ಸುಲ್ತಾನ್ ಪುರ ಎಂದು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ ಆಗಿತ್ತು. ಈ ಬಗ್ಗೆ ಸ್ವತಃ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ವಾಟ್ಸಾಪ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ ಆಗಿತ್ತು.
ಆಘಾತಕಾರಿ ಸುದ್ದಿ: ಉಡುಪಿಯ ಶಿವಳ್ಳಿ ಗ್ರಾಮವನ್ನು ಸುಲ್ತಾನ್‌ಪುರ ಎಂದು ಹೆಸರಿಸಲಾಗಿದೆ (ದಿಶಾಂಕ್‌ನಿಂದ ಸ್ಕ್ರೀನ್‌ಶಾಟ್, GOK ಅಪ್ಲಿಕೇಶನ್ 1 ನವೆಂಬರ್ 2024 ರಂದು ರಾತ್ರಿ 9 ಗಂಟೆಗೆ ವೀಕ್ಷಿಸಲಾಗಿದೆ). ಎಲ್ಲಾ ಉಡುಪಿ ನಾಗರಿಕರು ವಕ್ಫ್ ಪ್ರವೇಶಕ್ಕಾಗಿ ನಿಮ್ಮ RTC ಅನ್ನು ಪರಿಶೀಲಿಸಿ..”ಎಂಬ ಸುಳ್ಳು ಸುದ್ದಿ ವಾಟ್ಸಪ್’ನಲ್ಲಿ ಹರಿದಾಡಿತ್ತು.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು " Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮನಕಾಶೆಯನ್ನು ಲಗತ್ತಿಸಲಾಗಿದೆ. ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು https:// www.landrecords.karnataka.gov.in/ service3/Default.aspx ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ *SULTANAPUR* ಎಂದು ದಾಖಲಾಗಿರುದಿಲ್ಲ. 
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲಿ *Sultanpur* ಎಂದು ಇರುವುದಿಲ್ಲ, ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo