"ಮಠ" ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ..ಸಾಲಗಾರರ ಕಾಟ ತಾಳಲಾರದೆ ನಟ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು. ಅವರ ಅಪಾರ್ಟಮೆಂಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಕನ್ನಡಕ್ಕೆ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಅನೇಕ ಅತ್ಯುತ್ತಮ ಸಿನಿಮಾಗಳನ್ನು ನೀಡಿದ ನಿರ್ದೇಶಕ ಗುರು ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. ವಿವಾಹದ ಬಳಿಕ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ