ಪಳ್ಳಿ-ಮೂಡುಬೆಳ್ಳೆ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದುಕೊಂಡು ವಾಹನಗಳ ಸಂಚಾರಕ್ಕೆ ದುಸ್ಥಿತಿ ಉಂಟಾಗಿದೆ. "ಇತ್ತೀಚಿಗಷ್ಟೇ ರಸ್ತೆಗೆ ತೇಪೆ ಹಾಕಲಾಗಿದ್ದು ಕಳೆದ ಮಳೆಗಾಲದ ನಂತರ ರಸ್ತೆ ಮತ್ತೆ ಬಿರುಕು ಬಿಟ್ಟಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಮುಂದಿನ ತಿಂಗಳೊಳಗೆ ರಸ್ತೆಯನ್ನು ಸಂಪೂರ್ಣ ಮರುನಿರ್ಮಾಣ ಮಾಡಿ ಮಳೆಗಾಲದ ಒಳಗೆ ಒಣಗಿ ಸುಸಜ್ಜಿತವಾಗಬೇಕಾಗಿದೆ. ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ವಾಹನ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಅನೇಕ ವಾಹನಗಳು ಪಳ್ಳಿ, ನಾಲ್ಕುಬೀದಿ ಮೂಲಕ ಮಣಿಪಾಲ ಉಡುಪಿ ಕಡೆಗೆ ಸಂಚರಿಸುತ್ತಿವೆ. ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಮಾಜಿಕ ಕಾರ್ಯಕರ್ತ ವಿಷ್ಣುಪ್ರಸಾದ್ ಕೊಡಿಬೆಟ್ಟು ಮನವಿ ಮಾಡಿದ್ದಾರೆ.
TRENDING
-
ನವದೆಹಲಿ: ಪಾಕಿಸ್ತಾನ ಕ್ಷಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕ...
-
ಉಡುಪಿ, ಮೇ ೯: ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನ ಕೇವಲ ಪುರಾಣ ಕಥೆಗಳಿಗೆ ಸೀಮಿತವಾಗದೆ ಸಮಕಾಲೀನ ವಿಷಯಗಳಿಗೂ ಸ್ಪಂದಿಸುತ್ತಿದೆ. ಇತ್ತೀಚೆಗೆ ಭಾರತ ಮತ್ತ...
-
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕ...
-
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ...
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 6...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಪಳ್ಳಿ-ಮೂಡುಬೆಳ್ಳೆ ರಸ್ತೆ ದುರಸ್ತಿಗೆ ಆಗ್ರಹ
ಪಳ್ಳಿ-ಮೂಡುಬೆಳ್ಳೆ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದುಕೊಂಡು ವಾಹನಗಳ ಸಂಚಾರಕ್ಕೆ ದುಸ್ಥಿತಿ ಉಂಟಾಗಿದೆ. "ಇತ್ತೀಚಿಗಷ್ಟೇ ರಸ್ತೆಗೆ ತೇಪೆ ಹಾಕಲಾಗಿದ್ದು ಕಳೆದ ಮಳೆಗಾಲದ ನಂತರ ರಸ್ತೆ ಮತ್ತೆ ಬಿರುಕು ಬಿಟ್ಟಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಮುಂದಿನ ತಿಂಗಳೊಳಗೆ ರಸ್ತೆಯನ್ನು ಸಂಪೂರ್ಣ ಮರುನಿರ್ಮಾಣ ಮಾಡಿ ಮಳೆಗಾಲದ ಒಳಗೆ ಒಣಗಿ ಸುಸಜ್ಜಿತವಾಗಬೇಕಾಗಿದೆ. ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ವಾಹನ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಅನೇಕ ವಾಹನಗಳು ಪಳ್ಳಿ, ನಾಲ್ಕುಬೀದಿ ಮೂಲಕ ಮಣಿಪಾಲ ಉಡುಪಿ ಕಡೆಗೆ ಸಂಚರಿಸುತ್ತಿವೆ. ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಮಾಜಿಕ ಕಾರ್ಯಕರ್ತ ವಿಷ್ಣುಪ್ರಸಾದ್ ಕೊಡಿಬೆಟ್ಟು ಮನವಿ ಮಾಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ