ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 66.14 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ದಕ್ಷಿಣ ಕನ್ನಡ (91.12%) ಹಾಗೂ ಉಡುಪಿ ಜಿಲ್ಲೆ(89.96%) ಹಾಗೂ ಉತ್ತರ ಕನ್ನಡ ಜಿಲ್ಲೆಗೆ(83.19%) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಸಿಕ್ಕಿದೆ. ಕಲಬುರಗಿ ಜಿಲ್ಲೆಗೆ ರಾಜ್ಯದಲ್ಲಿ ಕೊನೆ ಸ್ಥಾನ ದೊರೆತಿದೆ.
ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಇಂದು ಬೆಳಗ್ಗೆ 11.30ಕ್ಕೆ ಮಂಡಳಿಯ ಅಧಿಕಾರಿಗಳ ಜತೆ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಪ್ರಕಟಿಸಿದರು. ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಬಾರಿ 22 ವಿದ್ಯಾರ್ಥಿಗಳುನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು
ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.9 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ 10 ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4.5 ಲಕ್ಷ ಹುಡುಗರು ಮತ್ತು 4.3 ಲಕ್ಷ ಹುಡುಗಿಯರು ವಾರ್ಷಿಕ ಮಂಡಳಿ ಪರೀಕ್ಷೆಗಳಲ್ಲಿ ಭಾಗವಹಿಸಿದ್ದರು. ಒಟ್ಟಾರೆ ಉತ್ತೀರ್ಣ ಶೇಕಡಾವಾರು 73.40 ರಷ್ಟಿತ್ತು, ಇದು 2023 ರಲ್ಲಿ 83.89 ಪ್ರತಿಶತ ಮತ್ತು 2022 ರಲ್ಲಿ 85.13 ಪ್ರತಿಶತದಿಂದ ಕಡಿಮೆಯಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ