ಇತ್ತೀಚಿಗೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಿವರತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಐಪಿಎಲ್ ನಡೆಯುತ್ತಿರುವಾಗಲೇ ರೋಹಿತ್ ಶರ್ಮಾ ಅವರ ಈ ನಿರ್ಧಾರ ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಭಾರತ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸುವ ಮುನ್ನ ರೋಹಿತ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದರು. ಈಗ ವಿರಾಟ್ ಸಹ ಇದೇ ಹಾದಿ ತುಳಿದಂತೆ ಕಾಣುತ್ತಿದೆ.
ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲ
ವರದಿಗಳ ಅನುಸಾರ ಇಂಗ್ಲೆಂಡ್ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಪ್ರಕಟಿಸಬೇಕಾಗುತ್ತದೆ. ಇದೇ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಂತಹ ಅನುಭವಿ ಆಟಗಾರರು ತಂಡಕ್ಕೆ ಅಲಭ್ಯರಾದಲ್ಲಿ ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಟೀಕೆಗೆ ಗುರಿಯಾಗಿದ್ದರು. ಆಗಿನಿಂದಲೂ ವಿರಾಟ್ ಇತಂಹದೊಂದು ನಿರ್ಧಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ವಿರಾಟ್ ಕೊಹ್ಲಿ ಸಾಧನೆ
ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳಲ್ಲಿ 9230 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 46 ಆಗಿದೆ. ಒಟ್ಟಾರೆ ವಿರಾಟ್ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ