ಉಡುಪಿ: ನಾಯಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ (29) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಇಂದು ಮುಂಜಾನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಮರ್ವಿನ್ ಅವರ ಸ್ನೇಹಿತರಾದ ಪ್ರಜ್ವಲ್ ಮತ್ತು ಪ್ರಸಾದ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ನೆರವಿನೊಂದಿಗೆ ಉಚ್ಚಿಲ ಆಂಬ್ಯುಲೆನ್ಸ್‌ನ ಜಲಾಲುದ್ದೀನ್, ಹಮೀದ್, ಕೆ.ಎಂ. ಸಿರಾಜ್ ಮತ್ತು ಅನ್ವರ್ ಕೋಟೇಶ್ವರ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಮೂಲಗಳ ಪ್ರಕಾರ, ಮುಂಜಾನೆ ಮೂಳೂರು ಮಾರ್ಗವಾಗಿ ಬರುತ್ತಿದ್ದ ಕಾರು, ನಾಯಿಯೊಂದು ಅಡ್ಡಬಂದಾಗ ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮರ್ವಿನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಉಡುಪಿ ಮತ್ತು ಮಂಗಳೂರಿನಲ್ಲಿ ಪ್ರಸಿದ್ಧ ಡಿಜೆಯಾಗಿ ಗುರುತಿಸಿಕೊಂಡಿದ್ದ ಮರ್ವಿನ್, ಹಲವಾರು ಕೊಂಕಣಿ ಸಂಗೀತ ವೀಡಿಯೊಗಳನ್ನು ನಿರ್ದೇಶಿಸಿದ್ದರು. ನಿನ್ನೆಯಷ್ಟೇ ಅವರ ಹೊಸ ಕೊಂಕಣಿ ಮ್ಯೂಸಿಕ್ ವಿಡಿಯೊ ಬಿಡುಗಡೆಯಾಗಿತ್ತು. ಅವರ ಅಕಾಲಿಕ ಮರಣಕ್ಕೆ ಸಂಗೀತ ಲೋಕ ಮತ್ತು ಸ್ನೇಹಿತರ ವಲಯದಲ್ಲಿ ತೀವ್ರ ಆಘಾತ ವ್ಯಕ್ತವಾಗಿದೆ.
ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾ
ರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ