ಉಡುಪಿ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಗಣೇಶ ವಿಸರ್ಜನಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 27 ರಿಂದ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪವಿಭಾಗಗಳ ವ್ಯಾಪ್ತಿಯಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ, ಆಗಸ್ಟ್ 27ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ, ಉಡುಪಿ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 29 ಮತ್ತು 31ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಬಾರ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ