ಸುದ್ದಿವಿಶೇಷ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಸುದ್ದಿವಿಶೇಷ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ರಾಜ್ಯ ಸರ್ಕಾರದಿಂದ 3 ಕೃಷಿ ಕಾಯ್ದೆ ವಾಪಾಸ್‌ಗೆ ನಿರ್ಧಾರ ; ಚೆಲುವರಾಯಸ್ವಾಮಿ

 


ಧಾರವಾಡ : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ 3 ಕೃಷಿ ಕಾಯಿದೆ ವಾಪಸ್ ಪಡೆಯಲು ರೈತರು ಆಗ್ರಹಿಸಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಎಪಿಎಂಸಿ ತಿದ್ದುಪಡಿ ಕಾಯಿದೆ, ಭೂ ಸುಧಾರಣಾ ಕಾಯಿದೆ ಸೇರಿ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದು, ಮೂರು ದಿನಗಳಲ್ಲಿ ಮಳೆ ಬಾರದೇ ಇದ್ದರೆ ಮೋಡ ಬಿತ್ತನೆಗೆ ನಿರ್ಧಾರ ಮಾಡಲಾಗುತ್ತದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದಿದ್ದಾರೆ.





© all rights reserved
made with by templateszoo